ಲೋಕಬಂಧು ನ್ಯೂಸ್ | ಬೆಂಗಳೂರು, ಆ.7
ಸಾಕಷ್ಟು ರಾಜಕೀಯ ಬೆಳವಣಿಗಳ ಬಳಿಕ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಶುಕ್ರವಾರ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ.
ವಿಧಾನಮಂಡಲ ಅಧಿವೇಶನ ನಡೆಯುವಾಗ ಆ.14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಮಾರ್ ಅವರ ನಿರಂತರ ಮನವಿ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿ ಸಭಾಪತಿ ಸ್ಥಾನ ತೊರೆದಿದ್ದಾರೆ.
ಸಿಎಂ ಡಿಕೆಶಿ, ಕೆಪಿಸಿಸಿ ಅಧ್ಯಕ್ಷರ ಸುದೀರ್ಘ ಮನವೊಲಿಕೆ ಬಳಿಕ ಅವರು ಹುದ್ದೆ ತೊರೆದಿದ್ದು, 'ಸ್ವಇಚ್ಛೆಯಿಂದ ರಾಜೀನಾಮೆ' ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ರಾಜೀನಾಮೆ ಸಲ್ಲಿಕೆಯಾದ ಕೆಲವೇ ನಿಮಿಷಗಳಲ್ಲಿ ಪರಿಷತ್ ಕಾರ್ಯದರ್ಶಿ (ಪ್ರಭಾರ) ಜ್ಯೋತಿ ಅವರು ಸಭಾಪತಿ ಸ್ಥಾನ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದರು!
ತರಾತುರಿಯಲ್ಲಿ ರಾಜೀನಾಮೆ ಸಲ್ಲಿಸುವಂತೆ ಸಿಎಂ ಹೇಳಿದ್ದಕ್ಕೆ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರಕಾರದ ನಡೆಯನ್ನು ಖಂಡಿಸಿ ರುವ ಬಿಜೆಪಿನಾಯಕರ 'ರಾಜೀನಾಮೆ ಸಲ್ಲಿಸುವಂತೆ ಒತ್ತಡ ಹೇರಿರುವುದು ಸರಿಯಲ್ಲ'ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೊರಟ್ಟಿ ಅವರನ್ನು ಹಂಗಾಮಿ ಸಭಾಪತಿಯಾಗಿ ಸರ್ಕಾರ ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
