ಪತ್ರಕರ್ತನ ಮೇಲಿನ ಹಲ್ಲೆಗೆ ಶ್ರೀರಾಮಸೇನೆ ಖಂಡನೆ

ಲೋಕಬಂಧು ನ್ಯೂಸ್ ಉಡುಪಿ, ಆ.22
ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಶ್ರೀರಾಮಸೇನೆಯ ಮಂಗಳೂರು ವಿಭಾಗಾಧ್ಯಕ್ಷ ಜಯರಾಂ ಅಂಬೆಕಲ್ಲು ಖಂಡಿಸಿದ್ದಾರೆ.
ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿರುವುದು ಖಂಡನೀಯ.


ಪತ್ರಕರ್ತರ ಮೇಲೆ ನಡೆಯುವ ಹಲ್ಲೆ ಕೇವಲ ಒಬ್ಬ ವ್ಯಕ್ತಿಯ ಮೇಲಿನ ದೌರ್ಜನ್ಯವಲ್ಲ, ಅದು ಮಾಧ್ಯಮ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ದಾಳಿ. ಜನರ ಸಮಸ್ಯೆಗಳನ್ನು ಸಮಾಜದ ಮುಂದಿಡುವ ಹಾಗೂ ಸತ್ಯವನ್ನು ವರದಿ ಮಾಡುವ ಪತ್ರಕರ್ತರಿಗೆ ಭಯಮುಕ್ತವಾಗಿ ಕೆಲಸ ಮಾಡುವ ವಾತಾವರಣ ಇರಬೇಕು.


ಯಾವುದೇ ವಿಚಾರದಲ್ಲಿ ಭಿನ್ನಾಭಿಪ್ರಾಯವಿದ್ದರೆ ಕಾನೂನುಬದ್ಧವಾಗಿ ಪರಿಹರಿಸಿಕೊಳ್ಳಬೇಕು. ಹಲ್ಲೆ ಅಥವಾ ಬೆದರಿಕೆ ನೀಡುವುದು ಖಂಡನೀಯ.


ಪತ್ರಕರ್ತನ ಮೇಲೆ ನಡೆದ ಹಲ್ಲೆ ಘಟನೆಯ ಬಗ್ಗೆ ಸರಕಾರ ಹಾಗೂ ಉಡುಪಿ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಯರಾಂ ಅಂಬೆಕಲ್ಲು ಸರಕಾರ ಹಾಗೂ ಗೃಹ ಇಲಾಖೆಯನ್ನು ಅಗ್ರಹಿಸಿದ್ದಾರೆ.