ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ; ರಕ್ತದಾನಿಗಳಿಗೆ ಸನ್ಮಾನ

ಲೋಕಬಂಧು ನ್ಯೂಸ್ | ಉಡುಪಿ, ಆ.1
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ 13ನೇ ವಾರ್ಷಿಕೋತ್ಸವ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಶನಿವಾರ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯಿತು‌.
ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಅಭಯ ಹಸ್ತ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ, ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್, ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ 40 ಸಾವಿರ ಯೂನಿಟ್ ರಕ್ತದ ಕೊರತೆ ಇದೆ. ಕೆಲವೊಂದು ಕಾಯಿಲೆಗಳಿಗೆ ಪ್ರತಿ ತಿಂಗಳಿಗೆ ರಕ್ತ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಜೊತೆಗೆ ‌ಆ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದರು.


ರಕ್ತದಾನ ಪವಿತ್ರ ಕಾರ್ಯ. ಹುಟ್ಟುಹಬ್ಬ ಇತ್ಯಾದಿಗಳನ್ನು ರಕ್ತದಾನದ ಮೂಲಕ ಆಚರಿಸುವುದರಿಂದ ರಕ್ತದ ಕೊರತೆ ನೀಗಿಸಬಹುದು ಎಂದರು.


ಮುಖ್ಯ ಅತಿಥಿಯಾಗಿದ್ದ ವಕೀಲ ಹಬೀಬ್ ಅಲಿ ಖಾದರ್ ಮಾತನಾಡಿ, ರಕ್ತದಾನ ಶ್ರೇಷ್ಠ ಮಾನವೀಯ ಸೇವೆಯಾಗಿದೆ. ರಕ್ತವನ್ನು‌ ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಹಾಗಾಗಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಬೇಕು. ಅದರಿಂದ ರಕ್ತದ ಕೊರತೆ ನೀಗಿಸಬಹುದು ಎಂದರು.


ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ.ನಿಕೇತ ರಕ್ತದಾನದ ಮಹತ್ವ ತಿಳಿಸಿ, ಒಬ್ಬರ ರಕ್ತದಾನದಿಂದ ಮೂವರ ಜೀವ ಉಳಿಸಬಹುದಾಗಿದೆ. 18 ವರ್ಷ ಮೇಲ್ಪಟ್ಟವರು 60 ವರ್ಷ ಪ್ರಾಯದ ವರೆಗೂ ರಕ್ತದಾನ ಮಾಡಬಹುದು. ಪ್ರತೀ 6 ತಿಂಗಳಿಗೊಮ್ಮೆ ರಕ್ತದಾನ ಮಾಡುವವರು 65 ವರ್ಷಗಳ ವರೆಗೂ ರಕ್ತದಾನ ಮಾಡಬಹುದು ಎಂದರು.


ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಕಾರ್ಯಕರ್ತೆ ವಿನುತಾ ಕಿರಣ್, ಮಂಗಳೂರು ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಮತ್ತು ಮುಸ್ತಫಾ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಉಪಸ್ಥಿತರಿದ್ದರು.


ರಕ್ತದಾನಿಗಳಿಗೆ ಸನ್ಮಾನ
ಈ ಸಂದರ್ಭದಲ್ಲಿ ರಕ್ತದಾನಿಗಳಾದ ರಾಕೇಶ್ ಬಂಗೇರ ಪಲಿಮಾರು, ರೋಯ್ಸ್ ಉದ್ಯಾವರ, ಬದ್ರುದ್ದೀನ್ ಎಚ್. ಹೆಜಮಾಡಿ, ರಫೀಕ್ ಕಲ್ಯಾಣಪುರ ಹಾಗೂ ಉದಯ ಕರ್ಕೇರ ಪಿತ್ರೋಡಿ ಅವರನ್ನು ಸನ್ಮಾನಿಸಲಾಯಿತು.


ಸಿಬ್ಬಂದಿ ದಿವ್ಯಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


ಶಿಬಿರದಲ್ಲಿ ಅನೇಕರಿಂದ ರಕ್ತದಾನ ನಡೆಯಿತು.