ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ್ಯ ವ್ರತ ಸಂಕಲ್ಪ

ಲೋಕಬಂಧು ನ್ಯೂಸ್ | ಮುಂಬೈ, ಆ.12
ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ ನವಿಮುಂಬೈನ ಪುತ್ತಿಗೆ ಶಾಖಾಮಠದಲ್ಲಿ ತಮ್ಮ 53ನೇ ಚಾತುರ್ಮಾಸ್ಯ ವ್ರತವನ್ನು ವಿಧಿಪೂರ್ವಕವಾಗಿ ಸ್ವೀಕರಿಸಿದರು.
ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದು ಶ್ರೀಪಾದರ ದರ್ಶನ ಪಡೆದು ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಭಕ್ತರ ಅಪೇಕ್ಷೆಯಂತೆ ಈ ಬಾರಿಯ ಚಾತುರ್ಮಾಸ್ಯ ವ್ರತವನ್ನು ನವಿಮುಂಬೈಯಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಪುತ್ತಿಗೆ ಶಾಖಾ ಮಠದಲ್ಲಿ ಕೈಗೊಳ್ಳಲು ನಿರ್ಧರಿಸಿದ್ದು ಈ ಭಾಗದ ಭಕ್ತರಿಗೆ ಚಾತುರ್ಮಾಸ್ಯದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೇರವಾಗಿ ಭಾಗವಹಿಸುವ ಅವಕಾಶ ದೊರೆಯಬೇಕೆಂಬುದು ಬಹುಕಾಲದ ಅಪೇಕ್ಷೆಯಾಗಿತ್ತು.


ಚಾತುರ್ಮಾಸ್ಯದ ನಿತ್ಯ ಪೂಜೆ, ಪಾಠ-ಪ್ರವಚನ, ಭಜನೆ, ಅನ್ನದಾನ ಮುಂತಾದ ಎಲ್ಲಾ ಕಾರ್ಯಕ್ರಮಗಳಿಗೂ ಭಕ್ತರು ಶ್ರದ್ಧೆ ಮತ್ತು ಉತ್ಸಾಹದಿಂದ ಪಾಲ್ಗೊಳ್ಳುವಂತೆ ಅಪೇಕ್ಷಿಸುವುದಾಗಿ ತಿಳಿಸಿದರು.


ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮೊದಲಾದವರಿದ್ದರು‌.