ಲೋಕಬಂಧು ನ್ಯೂಸ್ | ಬೆಂಗಳೂರು, ಆ.19
ಸರಳತೆಯಿಂದ ನಾಗೇಶ್ ಅವರು ಎಲ್ಲರ ಆಪ್ತರಾಗಿದ್ದರು. ನೇರ ನಡೆ- ನುಡಿಗೆ ಹೆಸರಾಗಿದ್ದರು. ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಜನರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು.
ಶಾಸಕರಾಗಿ ಹಾಗೂ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯ. ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ವಿದ್ಯಾರ್ಥಿಗಳ ಹಿತದ ಬಗ್ಗೆ ಅವರು ವಿಶೇಷ ಕಾಳಜಿ ಹೊಂದಿದ್ದರು.
ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಸೌಹಾರ್ದಯುತ ಸಂಬಂಧ ಕಾಪಾಡಿಕೊಂಡಿದ್ದರು ಎಂದು ಸಿಎಂ ಡಿ.ಕೆ. ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
