'ಸಂಗೀತ' ಸಾಧನೆಗೆ ಪರಿಷತ್ ಗೌರವ

ಲೋಕಬಂಧು ನ್ಯೂಸ್ ಉಡುಪಿ, ಆ.24
ನಿರಂತರ 25 ಗಂಟೆಗಳ ಕಾಲ ದಾಸ ಸಾಹಿತ್ಯದ ಗೀತೆಗಳನ್ನು ಹಾಡಿ ಇಂಡಿಯಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಗೈದ ವಿದುಷಿ ಸಂಗೀತ ಬಾಲಚಂದ್ರ ಅವರನ್ನು ಸೋಮವಾರ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ, ಪ್ರಭಾವತಿ ಶೆಣೈ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಪದಾಧಿಕಾರಿಗಳಾದ ರಾಘವೇಂದ್ರ ಪ್ರಭು ಕರ್ವಾಲು ದೀಪಾ ಚಂದ್ರಕಾಂತ್, ಸುಮಿತ್ರ ಭಟ್ ಮೊದಲಾದವರಿದ್ದರು