ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ

ಲೋಕಬಂಧು ನ್ಯೂಸ್ | ಮಣಿಪಾಲ, ಆ.22
ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂ. ಭ್ರಷ್ಟಾಚಾರದ ಹಗರಣದಲ್ಲಿ ಭಾಗಿಯಾಗಿರುವ ಆರೋಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ ಮತ್ತು ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಉಪಾಧ್ಯಕ್ಷ ಪೃಥ್ವಿರಾಜ್ ಮಣಿಪಾಲ್, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್, ಜಿಲ್ಲಾ ಕೈಗಾರಿಕಾ ಪ್ರಕೋಷ್ಠ ಸಂಚಾಲಕ ಸದಾನಂದ ಪ್ರಭು ಮೊದಲಾದವರಿದ್ದರು.