ಅವಹೇಳನಕಾರಿ ಭಾಷಣ: ಪ್ರಸಾದ್ ರಾಜ್ ಕಾಂಚನ್ ವಿರುದ್ಧ ದೂರು

ಲೋಕಬಂಧು ನ್ಯೂಸ್ | ಉಡುಪಿ, ಆ.4
ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಮನೆ ಮನೆಗೆ ತೆರಳಿ ಸಮರ್ಪಣಾ ನಿಧಿ ಸಂಗ್ರಹಿಸಿದವರನ್ನು `ಚಪ್ಪಲಿಯಿಂದ ಹೊಡೆಯಬೇಕು' ಎಂಬುದಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅವಮಾನಕಾರಿಯಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ನೇತೃತ್ವದಲ್ಲಿ ದೂರು ನೀಡಲಾಯಿತು.
ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹೇಳಿಕೆ ನೀಡಿದ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಉಡುಪಿ ನಗರ ಮಂಡಲ ಅಧ್ಯಕ್ಷ ದಿನೇಶ್ ಅಮೀನ್, ಸುದೀಪ್ ಶೆಟ್ಟಿ ನಿಟ್ಟೆ, ಶ್ರೀನಿಧಿ ಹೆಗ್ಡೆ, ಅಜಿತ್ ಜೋಗಿ, ಸತ್ಯಾನಂದ ನಾಯಕ್, ಬಿಲ್ಲಾಡಿ ಪೃಥ್ವಿರಾಜ್ ಶೆಟ್ಟಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.