ಶೆಟ್ಟರ್ ಸಹಿತ ಗಣ್ಯರಿಂದ ಪೇಜಾವರ ಶ್ರೀ ಭೇಟಿ

ಲೋಕಬಂಧು ನ್ಯೂಸ್ | ನವದೆಹಲಿ, ಆ.13
ಇಲ್ಲಿನ ಪೇಜಾವರ‌ ಮಠದ ಶಾಖೆಯಾದ ಶ್ರೀ ವೇದವ್ಯಾಸ ಗುರುಕುಲದಲ್ಲಿ ಚಾತುರ್ಮಾಸ್ಯ ವ್ರತ ನಿರತರಾಗಿರುವ ಪೇಜಾವರ‌ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಜಗದೀಶ ಶೆಟ್ಟರ್ ಸಹಿತ ವಿವಿಧ ಗಣ್ಯರು ಭೇಟಿ ಮಾಡಿ ಆಶೀರ್ವಾದ ಪಡೆದರು.
ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ದಕ್ಷಿಣ ಕನ್ನಡ ಸಂಸದ ಕ್ಯಾ.ಬೃಜೇಶ್ ಚೌಟ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಮೋಹನ ಆಳ್ವ ಅವರು ಶ್ರೀಗಳನ್ನು ಭೇಟಿ ಮಾಡಿದರು.