ಲೋಕಬಂಧು ನ್ಯೂಸ್ ಮಂಗಳೂರು, ಆ.16
ಹೊಸದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗಾಯನದ ವೇಳೆ ನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರೀಯ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ಸೂಚನೆ ನೀಡಿರುವುದನ್ನು ಖಂಡಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಬಿಜೆಪಿ ನಾಯಕ ವಿಕಾಸ್ ಪುತ್ತೂರು ಅವರು ಭಾನುವಾರ ಉರ್ವ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪೂರ್ಣ ಪ್ರಮಾಣದ ವಂದೇ ಮಾತರಂ ಗೀತೆಯನ್ನು ವಿರೋಧಿಸುತ್ತಲೇ ಬಂದಿದೆ. 1937ರಲ್ಲಿಯೇ ಹಾಡಿಗೆ ಕತ್ತರಿ ಹಾಕಿರುವುದು ಕಾಂಗ್ರೆಸ್. ಪೊಲೀಸರು ಎಫ್.ಐ.ಆರ್ ಮಾಡದಿದ್ದರೆ ರಾಜ್ಯದಲ್ಲಿ ರಾಷ್ಟ್ರ ವಿರೋಧಿ ಸರಕಾರ ಇದೆ ಎನ್ನುವುದು ಸಾಬೀತಾಗುತ್ತದೆ. ನಾವು ಸುಪ್ರೀಂ ಕೋರ್ಟ್ ಮೊರೆಹೋಗಿ ಖಾಸಗಿ ದೂರನ್ನು ದಾಖಲು ಮಾಡುವ ಮೂಲಕ ಮುಂದಿನ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದರು.