ಲೋಕಬಂಧು ನ್ಯೂಸ್ | ಬೆಂಗಳೂರು, ಆ.5
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡು ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತ ರಾಯಗೌಡ ಪಾಟೀಲ್ ಇದೀಗ ಸ್ಪೀಕರ್ಗೆ ಪತ್ರ ಬರೆದಿದ್ದು, ತನ್ನ ರಾಜಿನಾಮೆ ಪತ್ರವನ್ನು ಅಂಗೀಕರಿಸದಂತೆ ಮನವಿ ಮಾಡಿದ್ದಾರೆ.
ಸಿಎಂ ಶಿವಕುಮಾರ್ ಕರೆಪತ್ರದಲ್ಲಿ ಉತ್ತರ ಮಾಡಿ ಸಂತೈಸಿರುವ ಹಿನ್ನೆಲೆಯಲ್ಲಿ ರಾಜೀನಾಮೆಯ ನಿರ್ಧಾರದಿಂದ ಹಿಂದೆಸರಿದಿದ್ದೇನೆ ಎಂದವರು ಪತ್ರದಲ್ಲಿಉತ್ತರ ತಿಳಿಸಿದ್ದಾರೆ.
ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ನಾನು ರಾಜೀನಾಮೆ ನೀಡಿದ್ದೆ. ಇದು ನಿಷ್ಠಾವಂತರು, ಪ್ರಾಮಾಣಿಕರಿಗೆ ಕಾಲವಲ್ಲ, ದೊಡ್ಡ ಷಡ್ಯಂತ್ರವೇ ನಡೆಯುತ್ತಿದೆ. ಈ ವ್ಯವಸ್ಥೆಯ ರಾಜಕಾರಣವೇ ಬೇಡ. ಮನಸ್ಸಿಗೆ ಬಹಳ ನೋವಾಗಿದೆ ಎಂದು ಹೇಳಿ ಮಂಗಳವಾರ ಯಶವಂತ ರಾಯಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದೀಗ ಸ್ಪೀಕರ್ಗೆ ಪತ್ರ ಬರೆದಿರುವ ಯಶವಂತ ರಾಯಗೌಡ ಅವರು ನನ್ನ ರಾಜೀನಾಮೆಯನ್ನು ಹಿಂಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
