ಲೋಕಬಂಧು ನ್ಯೂಸ್ | ಉಡುಪಿ, ಆ.4
ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲವನ್ನು ವೃದ್ಧಿಸುವ ಜೊತೆಗೆ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸಲು ಸಹಕಾರಿಯಾಗಲಿದೆ ಎಂದು ಶಾಸಕ ಯಶಪಾಲ್ ಸುವರ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರಿನ ಇನ್ಫೋಸಿಸ್ ಪ್ರತಿಷ್ಠಾನ ಹಾಗೂ ಡಾ.ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ಇನ್ಫೋಸಿಸ್ ಪ್ರತಿಷ್ಠಾನದ ಕೊಡುಗೆ ಮಹತ್ವದ್ದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ನಿಕೇತನ, ವಿದ್ಯಾರ್ಥಿಗಳು ಡಿಜಿಟಲ್ ತಂತ್ರಜ್ಞಾನದ ಸಾಧಕ-ಬಾಧಕಗಳನ್ನು ಅರಿತುಕೊಂಡು, ಜವಾಬ್ದಾರಿಯುತ ಬಳಕೆ ಕುರಿತು ಜ್ಞಾನ ಹೊಂದಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಡಿಜಿಟಲ್ ಸಾಕ್ಷರರಾಗುವ ಅಗತ್ಯವಿದೆ ಎಂದರು.
ಉಡುಪಿ ಡಯಟ್ ಪ್ರಾಂಶುಪಾಲ ಡಾ.ಅಶೋಕ್ ಕಾಮತ್, ಉಡುಪಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾ ಪಿ. ಮತ್ತು ಡಾ.ಯಲ್ಲಮ್ಮ, ಐಕ್ಯುಎಸಿ ಸಂಚಾಲಕಿ ಪ್ರೊ.ಶ್ರೀಮತಿ ಅಡಿಗ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಭಟ್ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರಾಜೇಂದ್ರ ಕೆ. ನಿರೂಪಿಸಿದರು. ಕಾಲೇಜಿನ ಗ್ರಂಥಪಾಲಕ ವೆಂಕಟೇಶ್ ವಂದಿಸಿದರು.
.jpg)
.jpg)