ಗುಟ್ಕಾ ನಿಷೇಧ ಆದೇಶ ರದ್ದು

ಲೋಕಬಂಧು ನ್ಯೂಸ್ ಬೆಂಗಳೂರು, ಆ.14
ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶ ಹಿಂಪಡೆಯುವಂತೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.ನಿಷೇಧಕ್ಕೆ ಹಲವು ಶಾಸಕರು, ಅದರಲ್ಲೂ ಕಾಂಗ್ರೆಸ್‌ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಿರಿಯ ಶಾಸಕರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಸಂಪುಟ ಸಭೆಯಲ್ಲೂ ವಿಷಯ ಪ್ರಸ್ತಾಪವಾಗಿದ್ದು, ತಮ್ಮ ಗಮನಕ್ಕೆ ತಾರದೆ ಆದೇಶ ಹೊರಡಿಸಿದ್ದಕ್ಕೆ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ಸಿಎಂ ತರಾಟೆಗೆ ತೆಗೆದುಕೊಂಡಿದ್ದಾರೆ. ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ತೊಂದರೆಯಾಗಲಿದೆ ಎಂದಿದ್ದಾರೆ.