ಲೋಕಬಂಧು ನ್ಯೂಸ್ | ಉಡುಪಿ, ಆ.11
ಪುತ್ತಿಗೆ ಮಠದ ಪೂರ್ವ ಯತಿ ಶ್ರೀ ಸುಜ್ಞಾನೇಂದ್ರತೀರ್ಥರ ಆರಾಧನೆ ದಿನವಾದ ಸೋಮವಾರ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ಶ್ರೀಪಾದರು ಹಾಗೂ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರಿಗೆ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು.
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ದೇಶ- ವಿದೇಶಗಳಲ್ಲಿ ನಡೆಸುತ್ತಿರುವ ಶ್ರೀಕೃಷ್ಣ- ಮಾಧ್ವ ತತ್ವ ಪ್ರಚಾರ ಹಾಗೂ ತಮ್ಮ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ನಡೆಸಿದ ಭಗವದ್ಗೀತೆಯ ಪ್ರಚಾರ ಕಾರ್ಯದ ಬಗ್ಗೆ ಉಲ್ಲೇಖಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ಶ್ರೀಕಾಂತ ಉಪಾಧ್ಯಾಯ, ಕರಂಬಳ್ಳಿ ಬ್ರಾಹ್ಮಣ ಸಮಿತಿಯ ಅಧ್ಯಕ್ಷ ಕೃಷ್ಣರಾಜ ಭಟ್, ಪುತ್ತಿಗೆ ಮಠದ ಅಂತರರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನ ಆಚಾರ್ಯ ಮೊದಲಾದವರಿದ್ದರು.
