ಲೋಕಬಂಧು ನ್ಯೂಸ್ | ಉಡುಪಿ, ಆ.15
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಷ್ಟ್ರದ 80ನೇ ಸ್ವಾತಂತ್ರ್ಯೋತ್ಸವವನ್ನು ಉಡುಪಿ ಪತ್ರಿಕಾ ಭವನದಲ್ಲಿ ಶನಿವಾರ ಆಚರಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ವಾರ್ತಾಧಿಕಾರಿ ಮಂಜುನಾಥ್, ಪತ್ರಿಕಾ ಭವನ ಸಮಿತಿ ಮಾಜಿ ಸಂಚಾಲಕ ಅಜಿತ್ ಆರಾಡಿ, ರಿಚರ್ಡ್, ರತನ್ ಸುರಭಿ ಮೊದಲಾದವರಿದ್ದರು. ಮಾಜಿ ಅಧ್ಯಕ್ಷ ಅಲೆವೂರು ಹರೀಶ ಕಿಣಿ ಸಹಕರಿಸಿದರು.
