ಲೋಕಬಂಧು ನ್ಯೂಸ್ | ಉಡುಪಿ, ಆ.15
ಮಾಜಿ ಸೈನಿಕ ಕರ್ನಲ್ ಡಾ.ಫ್ರಾನ್ಸಿಸ್ ಇ.ಎ. ರೊಡ್ರಿಗಸ್ ಧ್ವಜಾರೋಹಣ ನೆರವೇರಿಸಿ, ದೇಶದ ಕಾನೂನು ಪಾಲಿಸುವುದರೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿ ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಅವರನ್ನು ಸೊಸೈಟಿ ವತಿಯಿಂದ ಗೌರವಿಸಲಾಯಿತು.
ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿ, ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯ ಮಹತ್ವವನ್ನು ವಿವರಿಸಿದರು. ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸುವಂತೆ ಕರೆ ನೀಡಿದರು
ಸೊಸೈಟಿ ಉಪಾಧ್ಯಕ್ಷ ಜಾರ್ಜ್ ಸ್ಯಾಮ್ಯುಯೆಲ್, ಶತಮಾನೋತ್ಸವ ಸಮಿತಿ ಸಂಚಾಲಕ ಪುರುಷೋತ್ತಮ ಪಿ. ಶೆಟ್ಟಿ, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ, ಶಾಖಾ ಸಲಹಾ ಸಮಿತಿ ಸದಸ್ಯರು ಹಾಗೂ ದೈನಿಕ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.
ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿ, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ನಿರೂಪಿಸಿದರು.
