ಲೋಕಬಂಧು ನ್ಯೂಸ್ | ಉಡುಪಿ, ಆ.5
ಸಾಹಿತ್ಯ, ಶಿಕ್ಷಣ, ಆಡಳಿತ, ಸಂಘಟನೆ, ಜಾನಪದ ಸಹಿತ ಹಲವು ಕ್ಷೇತ್ರಗಳಲ್ಲಿ ತಮ್ಮ ಅನುಪಮ ಸಾಧನೆ- ಸಿದ್ಧಿಗಳಿಂದ ಲೋಕ ವಿಖ್ಯಾತರಾದ ಪ್ರೊ.ಕು.ಶಿ.ಹರಿದಾಸ ಭಟ್ ಜಾನಪದ ಪ್ರಶಸ್ತಿಗೆ ಜಾನಪದ ವಿದ್ವಾಂಸ, ಸಂಶೋಧಕ ಕನರಾಡಿ ವಾದಿರಾಜ ಭಟ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ 20 ಸಾವಿರ ರೂ. ನಗದು ಸಹಿತ ಸನ್ಮಾನ ಒಳಗೊಂಡಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
