ಲೋಕಬಂಧು ನ್ಯೂಸ್ | ಕಾಪು, ಆ.29
ಕಾಪು ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಆಶ್ರಯದಲ್ಲಿ ಆ.28ರಂದು ಶುಕ್ರವಾರ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸಿದರು. ಅಸಮಾನತೆ, ಜಾತೀಯತೆಯನ್ನು ತೊಡೆದುಹಾಕಲು ಯತ್ನಿಸಿದ ನಾರಾಯಣ ಗುರು ಸಂಘಟನೆ ಮತ್ತು ಶಿಕ್ಷಣದಿಂದ ಸಮಾಜದ ಉದ್ಧಾರ ಸಾಧ್ಯ ಎಂದು ಪ್ರತಿಪಾದಿಸಿದ್ದರು ಎಂದರು.
ಈ ಸಂದರ್ಭದಲ್ಲಿ ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನಚಂದ್ರ ಸುವರ್ಣ, ಕಾಲೇಜು ಪ್ರಾಂಶುಪಾಲ ಗೋಪಾಲಕೃಷ್ಣ ಗಾಂವ್ಕರ್, ಕಾಪು ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಉಪ ತಹಶೀಲ್ದಾರ್ ದೇವಕಿ ಮೊದಲಾದವರಿದ್ದರು.
