ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕೊಚ್ಚಿಯಲ್ಲಿ ಎನ್‌ಐಎ ವಶಕ್ಕೆ

ಲೋಕಬಂಧು ನ್ಯೂಸ್ | ಮಂಗಳೂರು, ಆ.6
ಬಿಜೆಪಿ ಯುವಮೋರ್ಚಾ ಮುಖಂಡಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಾವಧಿಯಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.
2022ರ ಜುಲೈ 26ರಂದು ರಾತ್ರಿ ಕಡಬ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದರು.


ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆ ಕೈಗೆತ್ತಿಕೊಂಡಿದ್ದ ಎನ್‌ಐಎ, ಕೃತ್ಯದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸಕ್ರಿಯ ಕಾರ್ಯಕರ್ತರು ಭಾಗಿಯಾಗಿರುವುದನ್ನು ತನಿಖೆಯಲ್ಲಿ ಬಹಿರಂಗಪಡಿಸಿತ್ತು.


ಬಳಿಕ ಪಿ ಎಫ್ಐ ನಿಷೇಧವಾಗಿತ್ತು.