ಲೋಕಬಂಧು ನ್ಯೂಸ್ ಕಾರ್ಕಳ, ಆ.2
ಪತ್ರಕರ್ತ, ಸಾಹಿತಿ ದಿ.ಡಾ.ಶೇಖರ ಅಜೆಕಾರು ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2025-26ನೇ ಸಾಲಿನ 'ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿ'ಗೆ ಹಿರಿಯ ಪತ್ರಕರ್ತ ಹಾಗೂ ಡಂಗುರ ವಾರಪತ್ರಿಕೆ ಸಂಪಾದಕ ಕುಂಟಾಡಿ ದಯಾನಂದ ಪೈ ಆಯ್ಕೆಯಾಗಿದ್ದಾರೆ.ಸಾಣೂರು ರಾಜೇಶ್ವರಿ ಕಾಲೇಜಿನಲ್ಲಿ ಆಗಸ್ಟ್ 6ರಂದು ಪ್ರಶಸ್ತಿ ಪ್ರದಾನ ನಡೆಯಲಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಪ್ರಶಸ್ತಿ ಪ್ರದಾನ ಮಾಡುವರು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯ ಕ್ವಾರಿ ಮತ್ತು ಕ್ರಷರ್ ಅಸೋಸಿಯೇಷನ್‌ನ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಸಾಣೂರು ರಾಜೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸಾಣೂರು ಈಶಾವಾಸ್ಯಮ್ ಟ್ರಸ್ಟ್ ಅಧ್ಯಕ್ಷ ಶ್ರೀರಾಮ ಭಟ್, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ, ಉಪಾಧ್ಯಕ್ಷ ಉದಯ ಕುಮಾರ್ ಮುಂಡ್ಕೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಭಾಗವಹಿಸಲಿದ್ದಾರೆ ಎಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಸಚ್ಚರಿಪೇಟೆ ಮತ್ತು ಕೋಶಾಧಿಕಾರಿ ಸತೀಶ್ ಎಚ್. ಶೆಟ್ಟಿ ತಿಳಿಸಿದ್ದಾರೆ.