ಜನ್ಮಾಷ್ಟಮಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಲೋಕಬಂಧು ನ್ಯೂಸ್ ಉಡುಪಿ, ಆ.30
ಪರ್ಯಾಯ ಶೀರೂರು ಮಠ ಆಶ್ರಯದಲ್ಲಿ ಕೃಷ್ಣ ಮಠದಲ್ಲಿ ನಡೆಯುವ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ ಕಾರ್ಯಕ್ರಮ ಅಂಗವಾಗಿ ರಾಜಾಂಗಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶನಿವಾರ ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಚಾಲನೆ ನೀಡಿದರು.ಪ್ರತಿದಿನ‌ ಖ್ಯಾತನಾಮ‌ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.