ಲೋಕಬಂಧು ನ್ಯೂಸ್ ಕಾರ್ಕಳ, ಆ.13
ಶ್ರೀನಿವಾಸ ಸೇವಾ ಟ್ರಸ್ಟ್ ಮತ್ತು ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ ಇಲ್ಲಿನ ಎಸ್.ಜೆ. ಆರ್ಕೇಡ್'ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ ನಡೆಯಿತು.ಕಾರ್ಕಳ ಗ್ರಾಮಾಂತರ ಠಾಣಾ ಪ್ರೊಬೆಷನರಿ ಪಿಎಸ್ಐ ಸೀಮಾ ಅಂಜುಮ್ ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರಿಗೆ ,ವಿವಿಧ ಸಂದರ್ಭದಲ್ಲಿ ವಿವಿಧ ವ್ಯಕ್ತಿಗಳಿಂದ ವಿವಿಧ ಸ್ಥಳಗಳಲ್ಲಿ ನಡೆಯುವ ಲೈಂಗಿಕ ದೌರ್ಜನ್ಯಗಳು, ದೌರ್ಜನ್ಯ ತಡೆಯುವ ಬಗ್ಗೆ ಎಚ್ಚರಿಕೆ ವಿಧಾನ ಹಾಗೂ ಲೈಂಗಿಕ ದೌರ್ಜನ್ಯ ನಡೆದಾಗ ತೆಗೆದುಕೊಳ್ಳುವ ಕಾನೂನು ಕ್ರಮಗಳು
ಮಾತ್ರವಲ್ಲದೆ ಪೋಕ್ಸೊ ಕಾಯಿದೆ, ಬಾಲ್ಯ ವಿವಾಹ ತಡೆ ಕಾಯ್ದೆ, ಸಂಚಾರಿ ಕಾಯ್ದೆ, ಕೌಟುಂಬಿಕ ಸಮಸ್ಯೆ ಕಾಯ್ದೆಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.
ಮಹಿಳೆಯರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.
ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಂಸ್ಥಾಪಕಿ ಸಾಧನ ಜಿ. ಆಶ್ರಿತ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಸೌಜನ್ಯ ಉಪಸ್ಥಿತರಿದ್ದರು.
ಸಹನಾ ಪ್ರಾರ್ಥಿಸಿದರು. ಕಾವ್ಯ ಸ್ವಾಗತಿಸಿ,
ಶ್ವೇತಾ ವಂದಿಸಿದರು. ಸಂಜನಾ ನಿರೂಪಿಸಿದರು.