ಲೋಕಬಂಧು ನ್ಯೂಸ್ | ಉಡುಪಿ, ಆ.7
ಸ್ಥಳೀಯ ಆಹಾರ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಮೂಲಕ ಅದನ್ನು ಉಳಿಸಿ, ಬೆಳೆಸುವ ಕಾರ್ಯ ಇಂದಿನ ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ರಿಲಯನ್ಸ್ ಸ್ಮಾರ್ಟ್ ಬಜಾರ್ ಕಾರ್ಯ ಶ್ಲಾಘನೀಯ ಎಂದು ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಹೇಳಿದರು.
ಉಡುಪಿ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ಗುರುವಾರ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ಬಹುಮಾನ ವಿತರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ನಗರ ಕೇಂದ್ರಿತ ವಾಣಿಜ್ಯ ಸಂಸ್ಥೆಯೊಂದು ತುಳುನಾಡಿನ ಸಾಂಪ್ರದಾಯಿಕ ಆಚರಣೆಗೆ ಆದ್ಯತೆ ನೀಡಿರುವುದು ಸಂತಸದಾಯಕ. ಒಂದೇ ಸೂರಿನಡಿ ಸ್ಥಳೀಯ 43 ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳಿಗೆ ಅವಕಾಶ ಕಲ್ಪಿಸಿರುವುದು ವಿಶೇಷ. ಅಲ್ಲದೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಸ್ಮರಣಿಕೆ ಹಾಗೂ ಬಹುಮಾನ ನೀಡಿ, ಮಹಿಳೆಯರ ಪ್ರತಿಭೆಗೆ ವೇದಿಕೆ ಒದಗಿಸಿರುವುದು ಪ್ರಶಂಸನೀಯ ಎಂದರು.
ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ರಂಜನಿ ವಸಂತ್ ಹಾಗೂ ಸಹನಾ ಬಲ್ಲಾಳ್ ಸಹಕರಿಸಿದರು.
ರಿಲಯನ್ಸ್ ಸ್ಮಾರ್ಟ್ ಬಜಾರ್ ಮುಖ್ಯಸ್ಥ ರಾಘವೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ ಅಗೋಸ್ಟ್ 12ರಿಂದ 16ರ ವರೆಗೆ ಫುಲ್ ಪೈಸಾ ವಸೂಲ್ ಸೇಲ್ ಪ್ರಾರಂಭವಾಗಲಿದೆ ಎಂದರು.
ಜ್ಯೋತಿ ಶೇಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
