ಲೋಕಬಂಧು ನ್ಯೂಸ್ | ಉಡುಪಿ, ಆ.23
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿಎಲ್ಎ-2ಗಳ ಸಭೆ ಭಾನುವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಮಹಾನಗರಪಾಲಿಕೆ ಮಾಜಿ ಸದಸ್ಯ ಎ.ಸಿ. ವಿನಯರಾಜ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ಪ್ರಥಮ ಹಂತದ ಮಾಹಿತಿಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಬಿಎಲ್ಎ-2ಗಳಿಂದ ಪಡೆದರು.
ಮುಂದಿನ ಹಂತದ ಎಸ್ಐಆರ್ ಪ್ರಕ್ರಿಯೆಯಲ್ಲಿ ಬಿಎಲ್ಎ-2ಗಳ ಕರ್ತವ್ಯದ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಿ, ಎಲ್ಲಾ ಬಿಎಲ್ಎ-2ಗಳು ಸಕ್ರಿಯವಾಗಿ ತಮ್ಮ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಯುವಜನತೆಯನ್ನು ಸಂಘಟನೆ ಮೂಲಕ ಸದೃಢಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಭಾರತ್ ಜೋಡೋ ಯುವಕರ ಸಂಘಟನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ಎಲ್ಲಾ ಬೂತ್‌ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು 16ರಿಂದ 35 ವಯೋಮಿತಿಯ ಯುವಕ- ಯುವತಿಯರನ್ನು ನೋಂದಾಯಿಸಲು ಮುತುವರ್ಜಿ ವಹಿಸುವಂತೆ ಕರೆ ನೀಡಿದರು.
ಪಕ್ಷದ ನಾಯಕರಾದ ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಸೂರಜ್ ಕರ್ಕೇರ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಬಿಎಲ್ಎ-2ಗಳು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ ಕುಮಾರ್ ಮಂಚಿ ನಿರೂಪಿಸಿ, ಉಪಾಧ್ಯಕ್ಷ ಸತೀಶ್ ಕೊಡವೂರು ವಂದಿಸಿದರು.
.jpg)
.jpg)