ಉಡುಪಿಯಲ್ಲಿ ಸಚಿವ ರಿಜ್ವಾನ್ ಧ್ವಜಾರೋಹಣ

ಲೋಕಬಂಧು ನ್ಯೂಸ್ ಉಡುಪಿ, ಆ.14
ಸ್ವಾತಂತ್ರೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನಡೆಸುವ ಸಚಿವರ ಪರಿಷ್ಕೃತ ಪಟ್ಟಿ ಪ್ರಕಟಿಸಲಾಗಿದ್ದು, ಸರಕಾರದ ಕಾರ್ಯದರ್ಶಿ ವೀರಭದ್ರ ಹಂಚಿನಾಳ್ ಆದೇಶಿಸಿರುವ ಪಟ್ಟಿಯಂತೆ ಅಜ್ಜರಕಾಡು ಮೈದಾನದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.ಹಿಂದಿನ ಆದೇಶದಂತೆ ಉಡುಪಿಯಲ್ಲಿ ಮುಜರಾಯಿ ಹಾಗೂ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೆ.ಎಸ್.ಬಸವಂತಪ್ಪ ಧ್ವಜಾರೋಹಣ ನೆರವೇರಿಸುವುದೆಂದು ಪ್ರಕಟಿಸಲಾಗಿತ್ತು. ಇದೀಗ ಬಸವಂತಪ್ಪ ಅವರು ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ‌.