ಲೋಕಬಂಧು ನ್ಯೂಸ್ | ಬೆಂಗಳೂರು, ಆ.3
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದು, ಆ.4ರಂದು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಾಡ್‌ಫಾದರ್ ಇರುವವರಿಗೆ, ಪ್ರಭಾವಿಗಳಿಗೆ ಮಾತ್ರ ಸಚಿವ ಸ್ಥಾನ ಸಿಗುತ್ತಾ ಎಂದು ಪ್ರಶ್ನಿಸಿದರು. ತಮಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇದ್ದರೂ ಕೊನೆಯ ಕ್ಷಣದಲ್ಲಿ ಹೆಸರು ಕೈಬಿಟ್ಟಿರುವುದಾಗಿ ಅಸಮಾಧಾನ ಹೊರಹಾಕಿದರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳುವ ಮೂಲಕ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.
