ಲೋಕಬಂಧು ನ್ಯೂಸ್ | ತುಮಕೂರು, ಆ.5
ಸಚಿವ ಸಂಪುಟ ಪುನಾರಚನೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಸಚಿವ ಸ್ಥಾನ ಸಿಗದ ಹಿನ್ನೆಲೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇದೀಗ ಯುಟರ್ನ್ ಹೊಡೆದಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಮೂಲಕ ಮಾತುಕತೆ ನಡೆಸಿ ಮನವೊಲಿಸಿದ ಬಳಿಕ ಅವರು ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಎಲ್ಲಾ ನಿಗಮ-ಮಂಡಳಿಗಳನ್ನು ವಾಪಸ್ ಪಡೆಯಲಾಗುತ್ತದೆ ಎಂದು ತಿಳಿಸಿರುವುದರಿಂದ ರಾಜೀನಾಮೆ ಅಗತ್ಯವಿಲ್ಲ ಎಂದು ಹೇಳಿದ ಶ್ರೀನಿವಾಸ್, ಇದೀಗ ತನಗೆ ಯಾವುದೇ ಅಸಮಾಧಾನ ಇಲ್ಲ ಎಂದಿದ್ದಾರೆ!
