ಲೋಕಬಂಧು ನ್ಯೂಸ್ ಉಡುಪಿ, ಆ.24
ಶಾಸಕ ಯಶ್‌ಪಾಲ್ ಸುವರ್ಣ ಅವರು ಅಂಗಾಂಗ ದಾನದ ನೋಂದಣಿ ಮಾಡಿರುವುದು ಶ್ಲಾಘನೀಯ. ಅವರ ಹುಟ್ಟುಹಬ್ಬ ಸಂದರ್ಭದಲ್ಲಿ ಆಯೋಜಿಸಿದ ರಕ್ತದಾನ ಶಿಬಿರ ಅವರ ಸಾಮಾಜಿಕ ಕಾಳಕಳಿಯ ಬದ್ಧತೆಯ ಪ್ರತೀಕ ಎಂದು ನಿವೃತ್ತ ಶಿಕ್ಷಕ ಆರೂರು ತಿಮ್ಮಪ್ಪ ಶೆಟ್ಟಿ ಬಣ್ಣಿಸಿದರು.ಟೀಮ್ ಯಶ್‌ಪಾಲ್ ಸುವರ್ಣ ಉಡುಪಿ ನೇತೃತ್ವದಲ್ಲಿ ಶಾಸಕ ಯಶಪಾಲ್ ಎ. ಸುವರ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಪುರಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಬಿ.ಎನ್. ಶಂಕರ ಪೂಜಾರಿ ಅವರು, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುತ್ತಿರುವ ಶಾಸಕರ ಸೇವಾ ಮನೋಭಾವ ಮೆಚ್ಚುವಂತದ್ದು. ಅವರಿಗೆ ಯಶಸ್ಸಾಗಲಿ ಎಂದು ಹಾರೈಸಿದರು.
ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಅನಂತಪದ್ಮನಾಭ ಸಾಮಗ ಮಾತನಾಡಿ, ಶಾಸಕರ ಹುಟ್ಟುಹಬ್ಬ ಅಂಗವಾಗಿ ಆಯೋಜಿಸಿರುವ ರಕ್ತದಾನ ಶಿಬಿರ ಅರ್ಥಪೂರ್ಣ ಹಾಗೂ ಸಮಾಜಮುಖಿ ಕಾರ್ಯಕ್ರಮ ಎಂದರು.
ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನದ ಗೋಕುಲದಾಸ ಕಚ್ಚೂರು, ಜಿಲ್ಲಾ ಮರಾಟಿ ಸೇವಾ ಸಂಘದ ಅಧ್ಯಕ್ಷ ಕೆ.ಟಿ. ನಾಯ್ಕ್, ಮಲ್ಪೆ ಮತ್ಸ್ಯೋದ್ಯಮಿ ದಯಾನಂದ ಕೆ. ಸುವರ್ಣ, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಉದ್ಯಮಿ ಸುಧಾಕರ ಕುಂದರ್, ಜಿಲ್ಲಾಸ್ಪತ್ರೆಯ ರಕ್ತನಿಧಿ ವಿಭಾಗದ ಮುಖ್ಯಸ್ಥೆ ಡಾ.ವೀಣಾ, ಟೀಮ್ ಯಶ್‌ಪಾಲ್ ಸುವರ್ಣ ಉಡುಪಿ ಸಂಚಾಲಕ ಶೇಖರ ಶೆಟ್ಟಿ ಹಿರಿಯಡಕ ಉಪಸ್ಥಿತರಿದ್ದರು.
ಮಟ್ಟು ಯತೀಶ್ ಕೋಟ್ಯಾನ್ ಸ್ವಾಗತಿಸಿ, ವಿಜೇತಾ ಶೆಟ್ಟಿ ನಿರೂಪಿಸಿದರು.