ಕೃಷ್ಣಮಠದಲ್ಲಿ ಸಂಭ್ರಮದ ನಾಗರ ಪಂಚಮಿ

ಲೋಕಬಂಧು ನ್ಯೂಸ್ | ಉಡುಪಿ, ಆ.17
ಪರ್ಯಾಯ ಶೀರೂರು ಮಠ ಆಶ್ರಯದಲ್ಲಿ ಕೃಷ್ಣಮಠದಲ್ಲಿ ಸೋಮವಾರ ನಾಗರ ಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು‌.
ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಕೃಷ್ಣ ಮಠದ ವಾದಿರಾಜ ಯತಿ ಪ್ರತಿಷ್ಠಾಪಿತ ಸುಬ್ರಹ್ಮಣ್ಯ ಗುಡಿಯಲ್ಲಿ ಹಾಗೂ ಕೃಷ್ಣ ಮಠದ ನಾಗಬನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.