ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ನಾರಾಯಣ ಗುರು ಜಯಂತಿ

ಲೋಕಬಂಧು ನ್ಯೂಸ್ | ಉಡುಪಿ, ಆ.29
ಅಂಬಲಪಾಡಿ ಬಿಲ್ಲವ ಸೇವಾಸಂಘ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತ್ಯುತ್ಸವ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಭಜನಾ ಸೇವೆಯೊಂದಿಗೆ ಆ.28ರಂದು ಶುಕ್ರವಾರ ಸಂಭ್ರಮದಿಂದ ನೆರವೇರಿತು.
ಮಹಾಪೂಜೆ ಬಳಿಕ, ಎಸ್ಎಸ್ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ನೀಡಲಾಯಿತು.
ಸಂಘದ ಅಧ್ಯಕ್ಷ ಶಿವದಾಸ್ ಪಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸಿದ್ದರು.
ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಮುದ್ದಣ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕ್ರಿಶ್ಚಿಯನ್ ಪಿ.ಯು. ಕಾಲೇಜು ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್, ಸಂಘದ ಆಡಳಿತ ಸಮಿತಿ ಸದಸ್ಯ ರಾಜೇಂದ್ರ ಪಂದುಬೆಟ್ಟು, ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಂಘದ ಮಾಜಿ ಕೋಶಾಧಿಕಾರಿ ಸುರೇಶ್ ಎ., ಆಡಳಿತ ಸಮಿತಿ ಸದಸ್ಯರಾದ ಗುರುರಾಜ್ ಪೂಜಾರಿ ಮತ್ತು ಸತೀಶ್ ಜಿ. ಪೂಜಾರಿ ಆಗಮಿಸಿದ್ದರು.


ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್ ಮತ್ತು ವಿನಯ್ ಕುಮಾರ್, ಆಡಳಿತ ಸಮಿತಿ ಸದಸ್ಯರಾದ ಸುಧಾಕರ ಎ., ರಮೇಶ್ ಕೋಟ್ಯಾನ್, ಭಾಸ್ಕರ ಅಂಚನ್, ಕುಶಲ ಕುಮಾರ್ ಎ., ಭಾಸ್ಕರ ಕೋಟ್ಯಾನ್, ನಿತಿನ್ ಕುಮಾರ್, ಜನಾರ್ದನ ಪೂಜಾರಿ ಮತ್ತು ಚೆನ್ನಕೇಶವ, ಭಜನಾ‌ ಮಂಡಳಿ ಗೌರವ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಶಂಕರ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜೊತೆ ಕಾರ್ಯದರ್ಶಿ ಸಂಚಲ ಶಶಿಕಾಂತ್, ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ, ಅರ್ಚಕ ಅವಿನಾಶ್ ಪೂಜಾರಿ, ಜೀವನ್, ಅದಿತ್ ಮೊದಲಾದವರಿದ್ದರು


ಸಾಮೂಹಿಕ ಸಂತರ್ಪಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.