ಕಡಲ್ಕೊರೆತ: ತುರ್ತು ಕಾಮಗಾರಿಗೆ ಸೂಚನೆ

ಲೋಕಬಂಧು ನ್ಯೂಸ್ ಕಾಪು, ಆ.1
ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಲ ತೀರದಲ್ಲಿ ವಿಪರೀತ ಕಡಲ್ಕೊರೆತ ಉಂಟಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಬಂಧಿಸಿದ ಇಲಾಖಾಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತುರ್ತು ಕಾಮಗಾರಿ ನಿರ್ವಹಿಸುವಂತೆ ಸೂಚಿಸಿ, ಪ್ರಸ್ತುತ ನಡೆಯುತ್ತಿರುವ ಕಾಮಗಾರಿಯ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರೇಷ್ಮಾ ಮೆಂಡನ್, ಮಾಜಿ ಸದಸ್ಯ ಶರಣ್ ಕುಮಾರ್ ಮಟ್ಟು ಹಾಗೂ ಸ್ಥಳೀಯರು ಇದ್ದರು.