ಕೊನೇ ಕ್ಷಣದಲ್ಲಿ ಎಂಎಲ್.ಸಿ. ಗಾಯತ್ರಿ ಕೈಬಿಟ್ಟ ಕೈ ವರಿಷ್ಠರು

ಲೋಕಬಂಧು ನ್ಯೂಸ್ | ಬೆಂಗಳೂರು, ಆ.3
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೂತನ ಸಂಪುಟ ಪಟ್ಟಿಯಲ್ಲಿ ಹೆಸರು ಘೋಷಣೆಯಾಗಿದ್ದ‌ ನೂತನ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಕೈಬಿಡಲಾಗಿದ್ದು, ಅವರು ಮಂತ್ರಿಯಾಗಿ ಪ್ರತಿಜ್ಞೆ ಸ್ವೀಕರಿಸಲಿಲ್ಲ.
ಕೊನೇ ಕ್ಷಣದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಗಳಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದ್ದು, ಮಹಿಳಾ ಶಾಸಕಿಯರ ನಡುವಿನ ತೀವ್ರ ಪೈಪೋಟಿಯೇ ಇದಕ್ಕೆ ಕಾರಣ ಎಂದು ವರದಿಯಾಗಿದೆ.


20 ಮಂದಿ ನೂತನ ಸಚಿವರ ಪಟ್ಟಿಯಲ್ಲಿ ಗಾಯತ್ರಿ ಅವರ ಹೆಸರಿತ್ತು. ಆದರೆ, ಪರಿಷತ್‌ ಸದಸ್ಯೆಯಾಗಿ ಗಾಯತ್ರಿ ಇನ್ನೂ ಪ್ರಮಾಣ ಸ್ವೀಕರಿಸದ ಕಾರಣ ಪಕ್ಷದಲ್ಲಿ ಈ ಬಗ್ಗೆ ಅಸಮಾಧಾನ ಭುಗಿಲೆದಿತ್ತು.


ಮಹಿಳಾ ಸಚಿವ ಸ್ಥಾನಕ್ಕೆ ಗಾಯತ್ರಿ ಹೆಸರು ಘೋಷಣೆ ನಡುವೆಯೂ ಲಕ್ಷ್ಮಿ ಹೆಬ್ಬಾಳ್ಳರ್ ಮತ್ತು ಉಮಾಶ್ರೀ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಹಾಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಕೊನೆಯ ಕ್ಷಣದಲ್ಲಿ ಗಾಯತ್ರಿ ಹೆಸರು ಬಿಡಲೇಬೇಕು ಎಂಬ ರಾಜ್ಯ ನಾಯಕರ ಒತ್ತಡಕ್ಕೆ ಕಾಂಗ್ರೆಸ್ ವರಿಷ್ಠರು ಮಣಿದರು.