ಲೋಕಬಂಧು ನ್ಯೂಸ್ | ಉಡುಪಿ, ಆ.10
ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿ'ಸೋಜ ಶೂಟೌಟ್ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶಿಸಿದೆ.
ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲ ಅಲಿಯಾಸ್ ದೀಪಕ್ ನ್ಯಾಯಾಂಗ ಬಂಧನದಲ್ಲಿದ್ದರು.
ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದಲ್ಲಿ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಪುರುಷೋತ್ತಮ ಅವರು ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.
