ಖಾಸಗಿ ಬಸ್ ಬೆಂಕಿಗಾಹುತಿ

ಲೋಕಬಂಧು ನ್ಯೂಸ್ | ಬ್ರಹ್ಮಾವರ, ಆ.20
ಇಲ್ಲಿಗೆ ಸಮೀಪದ ಉಪ್ಪೂರಿನಲ್ಲಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ಗುರುವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಅದೃಷ್ಟವಶಾತ್ ಬಸ್ಸಿನಲ್ಲಿದ್ದ 7 ಮಂದಿ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.


ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆ ವೇಳೆ ನಿರ್ವಾಹಕ ಸಮಯಪ್ರಜ್ಞೆ ಮೆರೆದು ಪ್ರಯಾಣಿಕರನ್ನು ಕೂಡಲೇ ಕೆಳಗಿಳಿಸಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದ್ದು ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ಸಿನ ಇಡಿಸಿ ಬಾಕ್ಸ್'ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು ಘಟನೆ ಕುರಿತು ಮಾಹಿತಿ ಲಭಿಸಿದ ತಕ್ಷಣ ಉಡುಪಿ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬಸ್ಸಿಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.