ಪುನೀತ್ ಅತ್ತಾವರ್'ಗೆ ಉಡುಪಿ ಪ್ರವೇಶ ನಿರ್ಬಂಧ

ಲೋಕಬಂಧು ನ್ಯೂಸ್ ಉಡುಪಿ, ಆ.13
ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಬಜರಂಗದಳ ಮುಖಂಡ ಪುನೀತ್ ಅತ್ತಾವರ್'ಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.ಆ.14ರಿಂದ ನ. 13ರ ವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪುನೀತ್ ಅತ್ತಾವರ ಮುಖ್ಯ ಅತಿಥಿಯಾಗಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಬಂಧ ವಿಧಿಸಿದ್ದಾರೆ.


ಉಡುಪಿ ಪೊಲೀಸರು ಪುನೀತ್ ಅತ್ತಾವರ್'ಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಜಿಲ್ಲಾಡಳಿತದ ಈ ಕ್ರಮವನ್ನು ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಘಟಕ ಖಂಡಿಸಿದೆ.