ನಿಷೇಧಿತ ಮಾದಕ ದ್ರವ್ಯ ಮಾರಾಟ: ವ್ಯಕ್ತಿಯ ಬಂಧನ

ಲೋಕಬಂಧು ನ್ಯೂಸ್ ಉಡುಪಿ, ಆ.14
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ-ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿ ಆತನ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ 3 ಪ್ರಕರಣ ಮತ್ತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿವೆ.


ಅಲ್ಲದೆ, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.