ಲೋಕಬಂಧು ನ್ಯೂಸ್ ಉಡುಪಿ, ಆ.22
ಬೆನಗಲ್ ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ನೀಡುವ ಕವಿ ಕೂರಾಡಿ ಸೀತಾರಾಮ ಅಡಿಗ ನೆನಪಿನ 2026ನೇ ಸಾಲಿನ ಕಾವ್ಯ ಪ್ರಶಸ್ತಿಗೆ ಬೆಂಗಳೂರಿನ ಕವಿ ಡಾ. ಲಕ್ಷ್ಮಣ್ ವಿ.ಎ. ಅವರ ಪರಿಮಳದ ಬಾಕಿ ಮೊತ್ತ ಕವನ ಸಂಕಲನ ಆಯ್ಕೆಯಾಗಿದೆ.
71 ಕವನ ಸಂಕಲನಗಳು ಸ್ಪರ್ಧೆಗೆ ಬಂದಿದ್ದವು. ಹಿರಿಯ ವಿಮರ್ಶಕ ಪ್ರೊ.ಎಚ್. ದಂಡಪ್ಪ ತೀರ್ಪುಗಾರರಾಗಿದ್ದರು.
ಪ್ರಶಸ್ತಿ 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ ಎಂದು ಪ್ರಶಸ್ತಿ ಸಮಿತಿ ಸಂಚಾಲಕಿ ಪೂರ್ಣಿಮಾ ಜನಾರ್ದನ್ ತಿಳಿಸಿದ್ದಾರೆ.
