ಆ.30: ಗುರು ಸಂದೇಶ ಸಾಮರಸ್ಯ ಜಾಥಾ

ಲೋಕಬಂಧು ನ್ಯೂಸ್ | ಉಡುಪಿ, ಆ.29
ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ ಆಗಸ್ಟ್ 30ರಂದು ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಿಗ್ಗೆ 9 ಗಂಟೆಗೆ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಭಾಷಣ ಸ್ಪರ್ಧೆ ನಡೆಯಲಿದೆ.


ಭಾಷಣ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಎಸ್. ಕೆ. ಸಾಲ್ಯಾನ್ ಬೆಳ್ಮಣ್, ಮಲ್ಪೆ ಸಾಯಿಶ್ಯಾಮ್ ಬೋಟ್'ನ ಹರೀಶ್, ಮಣಿಪಾಲ ಉದಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ರಮೇಶ್ ಎ. ಬಂಗೇರ, ಗ್ರೂಪ್ ಆಫ್ ಶಿವಸಾಗರ್ ಆಡಳಿತ ನಿರ್ದೇಶಕ ಪ್ರಭಾಕರ್ ಪೂಜಾರಿ, ಕಾಪು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಅಡ್ವೆ, ಉಡುಪಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್,  ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಆದಿಉಡುಪಿ ಅಧ್ಯಕ್ಷ ಸೂರ್ಯೋದಯ ಪೆರಂಪಳ್ಳಿ, ಮಣಿಪಾಲ ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮಣಿಪಾಲ,  ಕಂಗಣಬೆಟ್ಟು ಶ್ರೀ ಭ.ತೀ.ಭಕ್ತ ವೃಂದ ಕಟ್ಟಡ ಸಮಿತಿ ಅಧ್ಯಕ್ಷ ವಿಶ್ವನಾಥ್ ಬೆಳ್ಚಡ, ತೋನ್ಸೆ ಬ್ರಹ್ಮ ಬೈದರ್ಕಳ ಪಂಚಧೂಮಾವತೀ ಗರೋಡಿ ಜೀರ್ಣೋದ್ಧಾರ ಸಮಿತಿ  ಅಧ್ಯಕ್ಷ ದಿನೇಶ್ ಜತ್ತನ್, ಬಿಲ್ಲವ ಸಂಘ ಪಡುಬಿದ್ರಿ ಅಧ್ಯಕ್ಷ ವೈ. ಸುಧೀರ್ ಪಡುಬಿದ್ರಿ,  ಬಿಲ್ಲವ ಸೇವಾ ಸಂಘ ಸಂತೆಕಟ್ಟೆ ಗೌರವಾಧ್ಯಕ್ಷ ಭಾಸ್ಕರ್ ಜತ್ತನ್, ಉದ್ಯಮಿ ಸೂರಜ್ ಪೂಜಾರಿ ಮಲ್ಪೆ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಗೌರವಾಧ್ಯಕ್ಷ ದಿವಾಕರ್ ಸನಿಲ್ ಉಪಸ್ಥಿತರಿರುವರು.


ಮಧ್ಯಾಹ್ನ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ ನಡೆಯಲಿದ್ದು,‌ ಬಳಿಕ 2 ಗಂಟೆಗೆ ಬನ್ನಂಜೆ ಸಾಮರಸ್ಯ ಜಾಥಾಕ್ಕೆ ಚಾಲನೆ ನೀಡಲಾಗುವುದು. ಭರತನಾಟ್ಯದಲ್ಲಿ ಗಿನ್ನೆಸ್ ದಾಖಲೆ ಮಾಡಿದ ವಿದುಷಿ ದೀಕ್ಷಾ, ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ, ಎಸ್ಎಸ್ಎಲ್.ಸಿ.ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರೀತಂ ಪೂಜಾರಿ, ಅಂತರರಾಷ್ಟ್ರೀಯ ಯೋಗ ಪಟು ತನುಶ್ರೀ ಹಾಗೂ ರಾಷ್ಟ್ರೀಯ ಕರಾಟೆ ಪಟು ಛಾಯಾ ಎಸ್. ಪೂಜಾರಿ ಚಾಲನೆ ನೀಡಲಿದ್ದಾರೆ.


ಗುರು ಸಂದೇಶ ಸಾಮರಸ್ಯ ಜಾಥಾ ಬನ್ನಂಜೆ ಬಿಲ್ಲವ ಸಂಘ- ಎಸ್.ಪಿ. ಆಫೀಸ್ ರಸ್ತೆ- ಉದ್ಯಾವರ- ಕಟಪಾಡಿ- ಕಾಪು- ಮೂಳೂರು- ಪಡುಬಿದ್ರಿ- ಹೆಜಮಾಡಿಯಾಗಿ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರವನ್ನು ತಲುಪಲಿದೆ.


ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಆರೋಗ್ಯ ಸಚಿವ ಯು.ಟಿ. ಖಾದರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್ ಮತ್ತು ಯಶಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಮತ್ತು ಪ್ರಮೋದ್ ಮಧ್ವರಾಜ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಮಹೇಶ್ ಅಂಚನ್, ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲೆ ಡಾ.ಸುರೇಖ, ಮೂಲ್ಕಿ ಬಿಲ್ಲವರ ಮಹಾಮಂಡಳ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ್ ಸಾಧು ಸಾಲ್ಯಾನ್, ಬನ್ನಂಜೆ ಬಿಲ್ಲವರ ಸಂಘದ ಅಧ್ಯಕ್ಷ ಶಶಿಧರ್ ಅಮೀನ್, ಬ್ರಹ್ಮಾವರ ಬಿಲ್ಲವರ ಸಂಘದ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಾಲ್ ಕುಮಾರ್ ಕಾರ್ಕಳ, ಕಾಪು ಬಿಲ್ಲವರ ಸಂಘದ ಅಧ್ಯಕ್ಷ ವಿಕ್ರಮ್ ಕಾಪು, ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಬೈಂದೂರು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ ಬೈಂದೂರು, ಹೆಬ್ರಿ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ ಬೇಳಂಜೆ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.


ಸುದ್ದಿಗೋಷ್ಟಿಯಲ್ಲಿ ಗೌರವಾಧ್ಯಕ್ಷ ದಿವಾಕರ ಸನಿಲ್, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಮಲ್ಪೆ ಮತ್ತು ವಿಜಯ ಕೋಟ್ಯಾನ್ ಪಿತ್ರೋಡಿ, ಗೌರವ ಸಲಹೆಗಾರ ಸುಧಾಕರ್ ಡಿ. ಅಮೀನ್ ಇದ್ದರು.