ಸೊಸೈಟಿ ಸಿಇಓ ಆತ್ಮಹತ್ಯೆ

ಲೋಕಬಂಧು ನ್ಯೂಸ್ | ಉಡುಪಿ, ಆ.11
ಅಂಬಲಪಾಡಿ ಸಮೀಪದ ಬಿ.ಆರ್. ಮೆಡೋಸ್ ಅಪಾರ್ಟ್ ಮೆಂಟ್'ನಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರನ್ನು ಉಡುಪಿ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ (44) ಎಂದು ಗುರುತಿಸಲಾಗಿದೆ.
ಅವರು ಕಳೆದ ನಾಲ್ಕು ವರ್ಷಗಳಿಂದ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.