ಸುರೇಶ್ ಶೇರಿಗಾರ್ ‌ನಿಧನ

ಲೋಕಬಂಧು ನ್ಯೂಸ್ | ಉಡುಪಿ, ಆ.20
ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು (65) ಬುಧವಾರ ನಿಧನರಾದರು.
ಅವರು ಸುಮಾರು 35 ವರ್ಷ ಕಾಲ ಬಿಜೆಪಿ ಉಡುಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.


ಬಿಜೆಪಿ ಹಿರಿಯ ನಾಯಕರಾಗಿದ್ದ ಡಾ. ವಿ.ಎಸ್.ಆಚಾರ್ಯ ಹಾಗೂ ಸೋಮಶೇಖರ್ ಭಟ್ ಅವರ ನಿಕಟವರ್ತಿಯಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೂ ಆಗಿದ್ದ ಸುರೇಶ್ ಶೇರಿಗಾರ್ ಕರ್ತವ್ಯ ನಿಷ್ಠೆ, ಕಾರ್ಯ ತತ್ಪರತೆಗೆ ಹೆಸರಾಗಿದ್ದರು.


ಸುರೇಶ್ ಶೇರಿಗಾರ್ ಅಲೆವೂರು ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ.


ಸುರೇಶ್ ಶೇರಿಗಾರ್ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ವಿ.ಸುನಿಲ್ ಕುಮಾರ್, ಯಶಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ ಮತ್ತು ಗುರುರಾಜ್ ಗಂಟಿಹೊಳೆ, ಪಕ್ಷ ಪ್ರಮುಖರಾದ ಕೆ.ಉದಯ ಕುಮಾರ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ರವಿ ಅಮೀನ್, ದಿನಕರ ಬಾಬು, ಶಿಲ್ಪಾ ಜಿ. ಸುವರ್ಣ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.