ಪ್ರಮಾಣವಚನ ಸ್ವೀಕಾರ ಸಮಾರಂಭ: ದೂರವುಳಿದ ಸಿದ್ದು, ಬಾರದ ಜಾರಕಿಹೊಳಿ!

ಲೋಕಬಂಧು ನ್ಯೂಸ್ | ಬೆಂಗಳೂರು, ಆ.3
ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಗೈರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಅವರು ನೂತನ ಸಚಿವರಿಗೆ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣವಚನ ಬೋಧಿಸಿದರು.


ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್ ಖಾನ್, ಎಸ್.ಎಸ್. ಮಲ್ಲಿಕಾರ್ಜುನ, ಪುಟ್ಟರಂಗಶೆಟ್ಟಿ, ಡಾ. ಅಜಯ್ ಸಿಂಗ್ ಸೇರಿದಂತೆ 19 ಮಂದಿ ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.


ಸಚಿವ ಸಂಪುಟ ಸೇರ್ಪಡೆ ಸಂಬಂಧ ಬೆಳಗಾವಿ ಕಾಂಗ್ರೆಸ್ ನಾಯಕರ ನಡುವಿನ ಬಿಕ್ಕಟ್ಟು ಡಿ.ಕೆ. ಶಿವಕುಮಾ‌ರ್ ತಲೆನೋವಿಗೆ ಕಾರಣವಾಗಿದೆ ಎನ್ನಲಾಗಿದೆ.