ಹಿಂದೂಗಳ ಧ್ವನಿ ಅಡಗಿಸುವ ಯತ್ನ ಖಂಡನೀಯ

ಲೋಕಬಂಧು ನ್ಯೂಸ್ ಕಾರ್ಕಳ, ಆ.14
ಹಿಂದೂ ಸಂಘಟನೆ ವತಿಯಿಂದ ನಡೆಯುವ ಅಖಂಡ ಭಾರತ ಪಂಜಿನ ಮೆರವಣಿಗೆ ಕಾರ್ಯಕ್ರಮದ ಪ್ರಮುಖ ಭಾಷಣಕಾರರಾಗಿ ಬರಬೇಕಾಗಿದ್ದ ಬಜರಂಗದಳದ ಮುಖಂಡ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ನರಸಿಂಹ ಮಾಣಿ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿರುವ ಜಿಲ್ಲಾಡಳಿತದ ನಡೆ ತೀವ್ರ ಖಂಡನೀಯ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಹೇಳಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರ ಜಿಲ್ಲಾಡಳಿತವನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದು, ಆ ಮೂಲಕ ತನ್ನ ಹಿಂದೂ ವಿರೋಧಿ ನೀತಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತಿದೆ. ಸರ್ಕಾರ ಪದೇ ಪದೇ ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದು, ಇಂಥ ದುಷ್ಟ ಯತ್ನಗಳನ್ನು ಕೈಬಿಟ್ಟು, ತಕ್ಷಣವೇ ಪ್ರವೇಶ ನಿರ್ಬಂಧದ ಆದೇಶವನ್ನು ಹಿಂಪಡೆಯಬೇಕು ಎಂದು ರಮಿತಾ ಅವರು ಆಗ್ರಹಿಸಿದ್ದಾರೆ.


ಇಲ್ಲವಾದಲ್ಲಿ ಮುಂದೆ ಹಿಂದೂ ಬಲವನ್ನು ನೋಡಬೇಕಾದಿತು. ಯಾರನ್ನೋ ಮೆಚ್ಚಿಸುವ ಭರದಲ್ಲಿ ತಮ್ಮ ಹಳ್ಳವನ್ನು ತಾವೇ ತೋಡಿಕೊಂಡು ಮುಂದೆ ಪಶ್ಚಾತ್ತಾಪ ಪಡಬೇಕಾದಿತು ಎಂದು ಎಚ್ಚರಿಕೆ ‌ನೀಡಿದ್ದಾರೆ.