ದೇಶಭಕ್ತಿ ಮೇಳೈಸಿದ 'ತಿರಂಗಾ ಯಾತ್ರೆ'

ಲೋಕಬಂಧು ನ್ಯೂಸ್ | ಮಣಿಪಾಲ, ಆ.12
ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬುಧವಾರ `ತಿರಂಗಾ ಯಾತ್ರೆ'- ದೇಶಕ್ಕಾಗಿ ದೇಶಕ್ತರ ನಡೆ ಕಾರ್ಯಕ್ರಮ ನಡೆಯಿತು.
ಇಲ್ಲಿನ ಗೋಲ್ಡನ್ ಜುಬಿಲಿ ಹಾಲ್ ಬಳಿಯ ಕೆನರಾ ಬ್ಯಾಂಕ್ ವೃತ್ತ ಕಚೇರಿ ಬಳಿ ತಿರಂಗಾ ಯಾತ್ರೆಗೆ ಶಾಸಕ ಯಶಪಾಲ್ ಸುವರ್ಣ ಚಾಲನೆ ನೀಡಿದರು.
ಮಣಿಪಾಲ ಕೆಎಂಸಿ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಅವಿನಾಶ್ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಕೂಡ್ಲು, ಆದರ್ಶ ಆಸ್ಪತ್ರೆ ನಿರ್ದೇಶಕ ಡಾ.ಚಂದ್ರಶೇಖರ್, ಕೆನರಾ ಬ್ಯಾಂಕ್ ಡಿಜಿಎಂ ಅಶೋಕ್, ಉದ್ಯಮಿ ಅಜಯ್ ಶೆಟ್ಟಿ, ಸಹಕಾರಿ ಯೂನಿಯನ್ ಉಡುಪಿ ಜಿಲ್ಲಾಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ ಶೆಟ್ಟಿ, ಪ್ರಮುಖರಾದ ಶ್ರೀನಿವಾಸ್ ಪೂಜಾರಿ, ವಿಜಯೇಂದ್ರ ಹೆರ್ಗ, ದಿನಕರ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಶ್ರೀಕಾಂತ ನಾಯಕ್, ವಸಂತ್ ಕಿಣಿ, ಪ್ರಭಾಕರ್ ಪೂಜಾರಿ, ದಿನೇಶ್ ಅಮೀನ್, ಉಮೇಶ್ ನಾಯ್ಕ್, ರಾಜು ಕುಲಾಲ್ ಮೊದಲಾದವರು ಭಾಗವಹಿಸಿದ್ದರು.
ಕೆನರಾ ಬ್ಯಾಂಕ್ ವೃತ್ತ ಕಚೇರಿ ಬಳಿಯಿಂದ ಹೊರಟ ತಿರಂಗಾ ಯಾತ್ರೆ ಟೈಗರ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮೂಲಕ ಸಾಗಿ ಮಣಿಪಾಲ ಕಾಯಿನ್ ಸರ್ಕಲ್ ಬಳಿ ಸಮಾಪನಗೊಂಡಿತು.
ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿ, ದೇಶಭಕ್ತಿ ಉದ್ದೀಪನಗೊಳಿಸುವ ಘೋಷಣೆ ಕೂಗಿದರು.