ಲೋಕಬಂಧು ನ್ಯೂಸ್ | ಉಡುಪಿ, ಆ.2
ಪೊಲೀಸ್ ಇಲಾಖೆ ನೇಮಕಾತಿ ಸಂಬಂಧ ಭಾನುವಾರ ಪೊಲೀಸ್ ಲಿಖಿತ ಪರೀಕ್ಷೆ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 6 ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಯಿತು.
ಉಡುಪಿಯ ಸರಕಾರಿ ಹೆಣ್ಣುಮಕ್ಕಳ ಪದವಿಪೂರ್ವ ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ ನೀಡಿ
ಪರಿಶೀಲಿಸಿದರು.
