ಕೆಂಪುಕೋಟೆಯಲ್ಲಿ ಮೊಳಗಲಿದೆ ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ

ಲೋಕಬಂಧು ನ್ಯೂಸ್ | ನವದೆಹಲಿ, ಆ.11
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆಗಸ್ಟ್ 15ರಂದು ಇಲ್ಲಿನ ಐತಿಹಾಸಿಕ ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ 'ವಂದೇ ಮಾತರಂ' ಗಾಯನಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ.
2047ರ ವೇಳೆಗೆ ಭಾರತವನ್ನು 'ವಿಕಸಿತ ಭಾರತ'ವನ್ನಾಗಿಸುವಲ್ಲಿ ಯುವಶಕ್ತಿಯ ಕೊಡುಗೆಯನ್ನು ಮುಖ್ಯ ಥೀಮ್ ಆಗಿ ಆಯ್ಕೆ ಮಾಡಲಾಗಿದೆ.


ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ನೇತೃತ್ವ ವಹಿಸಲಿದ್ದಾರೆ. ಪ್ರಧಾನಿ ಆಗಮಿಸಿದ ಬಳಿಕ 'ವಂದೇ ಮಾತರಂ' ಗಾಯನ, ನಂತರ ಧ್ವಜಾರೋಹಣ ಹಾಗೂ ರಾಷ್ಟ್ರಗೀತೆ 'ಜನ ಗಣ ಮನ' ಪ್ರಸ್ತುತಗೊಳ್ಳಲಿದೆ.