ಲೋಕಬಂಧು ನ್ಯೂಸ್ | ಕಾಪು, ಆ.29
ವರಮಹಾಲಕ್ಷ್ಮೀ ಹಬ್ಬವನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಆ.21ರಂದು ಶುಕ್ರವಾರ ವೈಭವದಿಂದ ನಡೆಯಿತು.
ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ನೆರೆದಿದ್ದ ಅನೇಕ ಮಹಿಳೆಯರಿಗೆ ಅರಿಶಿನ ಕುಂಕುಮದ ಜೊತೆಗೆ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಪ್ರಸಾದ ವಿತರಿಸಲಾಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಸದಸ್ಯರಾದ ಮಾಧವ ಆರ್. ಪಾಲನ್, ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ ಮತ್ತು ಚರಿತ ದೇವಾಡಿಗ, ಪ್ರಬಂಧಕ ಗೋವರ್ಧನ್ ಶೇರಿಗಾರ್ ಮೊದಲಾದವರಿದ್ದರು.
