ಲೋಕಬಂಧು ನ್ಯೂಸ್ ಉಡುಪಿ, ಸೆ.16
ಉಡುಪಿ ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಅಧಿಕಾರ ಸ್ವೀಕಾರ ಸಮಾರಂಭ ಸೆಪ್ಟೆಂಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಬ್ರಹ್ಮಗಿರಿಯಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.ನಿರ್ಗಮನ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಲಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಐವನ್ ಡಿ’ಸೋಜಾ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಉಪಾಧ್ಯಕ್ಷ ಮತ್ತು ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ನಾರಾಯಣಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಮತ್ತು ಸುಕುಮಾರ್ ಶೆಟ್ಟಿ, ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ ಮೊದಲಾದವರು ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.