ಲೋಕಬಂಧು ನ್ಯೂಸ್ | ಉಡುಪಿ
ಕಡಿಯಾಳಿಯ ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಯುವ ಘಟಕದ ನೇತೃತ್ವದಲ್ಲಿ ಅ.17ರಂದು ಉಡುಪಿ ದಾಂಡಿಯಾ ನಡೆಯಲಿದ್ದು, ಕಾರ್ಯಕ್ರಮದ ಪೋಸ್ಟರನ್ನು ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ಬಿಡುಗಡೆಗೊಳಿಸಿದರು.
ಅಂದು ಸಂಜೆ 6ರಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಅಧ್ಯಕ್ಷ ಪ.ವಸಂತ್ ಭಟ್, ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ, ವಜ್ರಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರೀಶ್ ಎಂ.ಅಂಚನ್, ಸಮಿತ ಕೋಶಾಧಿಕಾರಿ ಎಂ.ವಲ್ಲಭ ಭಟ್, ವಜ್ರಮಹೋತ್ಸವ ಸಮಿತಿ ಕೋಶಾಧಿಕಾರಿ ಮಂಜುನಾಥ್ ಹೆಬ್ಬಾರ್, ಯುವ ಘಟಕದ ಗೌರವಾಧ್ಯಕ್ಷರಾದ ಅಶ್ವತ್ಥ್ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಶೇಯಸ್ ದೇವಾಡಿಗ ಇದ್ದರು.
ಆಹಾರ ಮಳಿಗೆ
ದಾಂಡಿಯಾದಲ್ಲಿ ವಿಶೇಷ ತಿಂಡಿ ತಿನಿಸುಗಳ ಆಹಾರ ಮಳಿಗೆ, ಸೆಲ್ಫಿ ಪಾಯಿಂಟ್ ಇರಲಿದ್ದು ಅದನ್ನು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತೆ ರೂಪಶ್ರೀ ವರ್ಕಾಡಿ ಉದ್ಘಾಟಿಸಲಿದ್ದಾರೆ ಎಂದು ಯುವ ಘಟಕದ ಅಧ್ಯಕ್ಷ ಪ್ರದೀಪ್ ಶೆಟ್ಟಿ ತಿಳಿಸಿರುತ್ತಾರೆ.
