ಲೋಕಬಂಧು ನ್ಯೂಸ್ ಬ್ರಹ್ಮಾವರ, ಸೆ.7
ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಮೂಡಿಸುವುದರೊಂದಿಗೆ ಭವಿಷ್ಯದಲ್ಲಿ ಮೌಲ್ಯಯುತ ಬದುಕು ಬಾಳಲು ಪ್ರೇರಣೆಯಾಗಿ ಸ್ವಾವಲಂಬಿ ದೇಶ ಕಟ್ಟಲು ನೆರವಾಗಲಿದೆ ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.ಬಾರ್ಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮೂರು ದಿನಗಳ ಜಿಲ್ಲಾ ಮಟ್ಟದ ರೇಂಜರ್ಸ್ ವಿದ್ಯಾರ್ಥಿಗಳ ಪ್ರೇರಣಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು.
ಬಾರ್ಕೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ನಿರ್ದೇಶಕ ಡಾ.ಬಿ.ಜಗದೀಶ ಶೆಟ್ಟಿ, ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಸಂಯೋಜಕರಾದ ಪ್ರಭಾಕರ ಭಟ್ ಮತ್ತು ಸುಮನ ಶೇಖರ್ ಇದ್ದರು .