ಐಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್'ಗೆ ಅಷ್ಟಮಿ ಗೌರವ

ಲೋಕಬಂಧು ನ್ಯೂಸ್ | ನವದೆಹಲಿ, ಸೆ.2
ಇಲ್ಲಿನ ವಸಂತ್ ಕುಂಜ್ ವೇದವ್ಯಾಸ ಗುರುಕುಲದಲ್ಲಿ‌ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶ್ರೀಕೃಷಾಷ್ಟಮಿ ಉತ್ಸವವನ್ನು ವಿಶೇಷವಾಗಿ ನಡೆಸಲು ಸಂಕಲ್ಪಿಸಿದ್ದು, ಸೆ.3ರಂದು ಸಂಜೆ 6 ಗಂಟೆಗೆ ಶ್ರೀಪಾದರ ಉಪಸ್ಥಿತಿಯಲ್ಲಿ ಜನ್ಮಾಷ್ಟಮಿ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಕೇಂದ್ರ ಸಚಿವರಾದ ಹರ್ಷ ಮಲ್ಹೋತ್ರ ಮತ್ತು ಶೋಭಾ ಕರಂದ್ಲಾಜೆ, ಸಂಸದರಾದ ಮನೋಜ್ ತಿವಾರಿ ಮತ್ತು ಮೀನಾಕ್ಷಿ ಲೇಖಿ, ಶಾಸಕ ಅನಿಲ್ ಶರ್ಮ, ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಅಲೋಕ್ ಕುಮಾರ್ ಜಿ., ಪ್ರಧಾನ ಕಾರ್ಯದರ್ಶಿ ಡಾ.ವರಖೇಡಿ ಶ್ರೀನಿವಾಸ ಆಚಾರ್ಯ ಮೊದಲಾದವರು ಭಾಗವಹಿಸುವರು.


ಇದೇ ಸಂದರ್ಭದಲ್ಲಿ ಉಡುಪಿ ಮೂಲದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರಿಗೆ ಜನ್ಮಾಷ್ಟಮಿ ಪುರಸ್ಕಾರದೊಂದಿಗೆ ಗೌರವಿಸಲಾಗುವುದು.


ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ.